ಉಳ್ಳಾಲ: ಟೆಂಪೋ ಚಾಲಕರೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬಾಸ್ಟಿಯನ್ ಚರ್ಚ್ ಬಳಿ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ತೊಕ್ಕೊಟ್ಟು ಕೃಷ್ಣ ನಗರ ಲಚ್ಚಿಲ್ ನಿವಾಸಿ ನಾಗೇಶ್ (62) ಮೃತ ವ್ಯಕ್ತಿಯಾಗಿದ್ದು, ಇವರು ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು. ಟೆಂಪೋ ಪಾರ್ಕಿಂಗ್ ಮಾಡಿದ್ದ ಸ್ಥಳದಲ್ಲಿಯೇ ಇದ್ದು, ಅವರು ಸಂಪರ್ಕಕ್ಕೆ ಸಿಗದಿದ್ದ ಕಾರಣ ಸ್ಥಳೀಯರು ಹುಡುಕಾಟ ನಡೆಸಿದಾಗ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಮೃತರು ಪತ್ನಿ ಹಾಗು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.