ಪುತ್ತೂರು: ಟ್ರ್ಯಾಕ್ಟರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ನರಿಮೊಗರಿನ ಪಾಪೆತ್ತಡ್ಕ ಸಮೀಪ ಅ.1 ರಂದು ಸಂಭವಿಸಿದೆ.
ಅಪಘಾತದ ತೀವ್ರತೆಗೆ ಟ್ರ್ಯಾಕ್ಟರ್ ನಜ್ಜುಗುಜ್ಜಾಗಿದ್ದು, ಟ್ರ್ಯಾಕ್ಟರ್ ಚಾಲಕ ಸಣ್ಣಪುಟ್ಟ ಗಾಯಗಳಿಂದ ಪವಾಡ ಸದೃಶವಾಗಿ ಪಾರಾಗಿದ್ದಾರೆ. ಬೆಂಗಳೂರಿನಿಂದ ಕಾಣಿಯೂರು ಮಾರ್ಗವಾಗಿ ಪುತ್ತೂರಿಗೆ ಬರುತ್ತಿದ್ದ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಕಾರಿನಲ್ಲಿದ್ದವರು, ಅಪಾಯದಿಂದ ಪಾರಾಗಿದ್ದಾರೆ.
ಈ ಪರಿಸರದಲ್ಲಿ ಹಲವು ಅಪಘಾತಗಳು ಹಾಗೂ ಸಾವು-ನೋವುಗಳು ಸಂಭವಿಸಿದ್ದು, ಈ ಸ್ಥಳವನ್ನು ಅಪಘಾತ ವಲಯ ಎಂದು ಗುರುತಿಸಲಾಗಿದೆ. ಇದೀಗ ಅಪಘಾತ ನಡೆದ ಸ್ಥಳದಲ್ಲಿ ಗ್ರಾಮ ಪಂಚಾಯತ್ ಅವರು ಹಾಕಿರುವ “ಅಪಘಾತ ಸ್ಥಳ, ನಿಧಾನವಾಗಿ ಚಲಿಸಿ” ಎಂಬ ಬೋರ್ಡ್ ಕೂಡ ಇದೆ.