
ಛತ್ತೀಸ್‌ಘಡದಲ್ಲಿ ನಕ್ಸಲೀಯರ ವಿರುದ್ಧ ಭದ್ರತಾ ಪಡೆಗಳು ದೊಡ್ಡ ಯಶಸ್ಸು ಸಾಧಿಸಿವೆ. ಅಬುಹ್ಮದ್ ಅರಣ್ಯ ಪ್ರದೇಶದಲ್ಲಿ ಭೀಕರ ಎನ್‌ಕೌಂಟರ್ ನಡೆದಿದೆ.

ಈ ಘಟನೆಯಲ್ಲಿ 12 ನಕ್ಸಲೀಯರು ಸಾವನ್ನಪ್ಪಿದ್ದಾರೆ. ಈ ಪ್ರದೇಶದಲ್ಲಿ 50 ರಿಂದ 60 ನಕ್ಸಲೀಯರು ಇದ್ದಾರೆ ಎಂಬ ಖಚಿತ ಮಾಹಿತಿ ಸಿಕ್ಕಿದ ಹಿನ್ನೆಲೆಯಲ್ಲಿ ಇಂದು ನಸುಕಿನ ಜಾವ 3 ಗಂಟೆಗೆ ಭದ್ರತಾ ಪಡೆಗಳು ಈ ಕಾರ್ಯಾಚರಣೆ ನಡೆಸಿವೆ.
ಈ ಹಿಂದೆ ನಡೆದಿದ್ದ ಎನ್‌ಕೌಂಟರ್‌ನಲ್ಲಿ ಏಳು ಮಾವೋವಾದಿಗಳು ಪ್ರಾಣ ಕಳೆದುಕೊಂಡಿದ್ದರು.




