ಈಶಾನ್ಯ ರಾಜ್ಯ ಮಿಜೋರಾಂನಲ್ಲಿ ಭೀಕರ ದುರಂತ ಸಂಭವಿಸಿದೆ. ಸಾಯಿರಂಗ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೆ ಸೇತುವೆ ಕುಸಿದು 17 ಕಾರ್ಮಿಕರು ಸಾವನ್ನಪ್ಪಿದ್ದು, 35-40 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.