
ಮಂಗಳೂರು: ಪೂರ್ಣವಾಗಿ ಪಠ್ಯ ಪುಸ್ತಕ ಪರಿಷ್ಕರಣೆ ಆಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿಯವರು ಪಠ್ಯವನ್ನು ಬದಲಾಯಿಸಿದ್ದರು. ನಾವು ತ್ವರಿತವಾಗಿ ಸ್ವಲ್ಪ ಬದಲಾವಣೆ ಮಾಡಿ ಮೊದಲು ಇದ್ದಂತೆ ತಂದಿದ್ದೇವೆ. ಮುಂದಿನ ವರ್ಷ ಮಕ್ಕಳಿಗೆ ಅನುಕೂಲವಾಗುವಂತೆ ಬದಲಾಯಿಸುತ್ತೇವೆ ಎಂದು ಹೇಳಿದ್ದಾರೆ.
ಪಠ್ಯ ಪುಸ್ತಕ ಪರಿಷ್ಕರಣೆ ನಾನು ಅಧಿಕಾರಕ್ಕೆ ಬಂದ ಕೂಡಲೇ ಮಾಡಲಾಗಿದೆ. ಮಕ್ಕಳ ಭವಿಷ್ಯಕ್ಕೆ ಒಳ್ಳೆಯದಾಗಲಿ ಎಂದು ಈ ತೀರ್ಮಾನ ಮಾಡಲಾಗಿದೆ. ಇದರಲ್ಲಿ ಬಿಜೆಪಿಯವರು ಹೇಳುವ ಯಾವುದೇ ರಾಜಕೀಯ ಇಲ್ಲ. ಪಠ್ಯ ಪರಿಷ್ಕರಣೆ ವಿಚಾರವಾಗಿ ತಜ್ಞರ ಸಮಿತಿಯ ಸಹಾಯವನ್ನು ಪಡೆದು ಅವಶ್ಯಕತೆ ಇದ್ದಲ್ಲಿ ಬದಲಾಯಿಸುತ್ತೇವೆ. ರಾಜಕೀಯ ಉದ್ದೇಶ ಇಲ್ಲದೆ ಬದಲಾವಣೆ ಆಗಲಿದೆ. ಮುಖ್ಯಮಂತ್ರಿಗಳ ಸಲಹೆ ಪಡೆದು ಅವರ ಸಹಕಾರದಿಂದ ಎಲ್ಲವೂ ಆಗಲಿದೆ. ಮಕ್ಕಳಿಗೆ ಉತ್ತಮ ಮತ್ತು ತಿಳುವಳಿಕೆಯ ಪಠ್ಯಗಳು ಇರಬೇಕು ಎಂದರು.