ಪುತ್ತೂರು: ಒಂಬತ್ತು ವರ್ಷಗಳ ಹಿಂದೆ ನಡೆದಿದ್ದ ಅಪರಾಧ ಪ್ರಕರಣವೊಂದರ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಜಾರ್ಖಂಡ್ ರಾಜ್ಯದ ಗಾಲೋಡಿಯಾ ಗ್ರಾಮದ ಸತೀಶ್ ಗುಪ್ತ ಯಾನೆ ಮಹೋರಿ (33)ಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ.
ವೃತ್ತ ನಿರೀಕ್ಷಕ ರವಿ ಬಿ.ಎಸ್.ಅವರ ಮಾರ್ಗದರ್ಶನದಲ್ಲಿ ಮಂಗಳೂರು ಗ್ರಾಮಾಂತರ ವಾಮಂಜೂರಿನಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು. ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.