ಘೋಷಣೆ ಕೂಗಿದ ಕಾರ್ಯಕರ್ತರಿಗೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ

Share with

ಮಂಗಳೂರು : ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಬೋಳಿಯಾರಿನಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಭಾಗಿಯಾಗಿ “ಭಾರತ್ ಮಾತಾ ಕಿ ಜೈ” ಘೋಷಣೆ ಕೂಗಿದ ಕಾರ್ಯಕರ್ತರಿಗೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು ಗಾಯಾಳುಗಳು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಬೇಟಿ ಮಾಡಿ ಆರೋಗ್ಯ ವಿಚಾರಿಸದರು.
ಈ ಸಂದರ್ಭದಲ್ಲಿ ಮಾಧ್ಯಮವರ ಜೊತೆ ಮಾತನಾಡಿದ ಅವರು ಬಿಜೆಪಿ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಸಾರ್ವಜನಿಕವಾಗಿ ಅಟ್ಟಿಸಿಕೊಂಡು ಬಂದು ಚೂರಿ ಇರಿದ ಘಟನೆ ಖಂಡನೀಯ ಮತ್ತು ಇದೊಂದು ‌ಫ್ರೀಪ್ಲಾನ್ ಕೃತ್ಯವಾಗಿದ್ದು, ಘಟನೆಗೆ ಕಾರಣವಾಗಿರುವ ಆರೋಪಿಗಳ ಸಹಿತ ಸಹಕಾರ ನೀಡಿದ ಮತ್ತು ಯೋಜನೆ ರೂಪಿಸಿದ ಪ್ರತಿಯೊಬ್ಬ ವ್ಯಕ್ತಿಗಳನ್ನು ಬಂಧಿಸಿ ಅವರ ಮೇಲೆ ಕಠಿಣ ಕಾನೂನು ‌ಕ್ರಮ ಜರಗಿಸಿಬೇಕು ಎಂದು ಪೋಲೀಸರನ್ನು ಒತ್ತಾಯ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಭಾರತ್ ಮಾತ ಕೀ ಜೈ ಹಾಕಿದವರ ಮೇಲೆ ಹಾಕಿರುವ ಪ್ರಕರಣವನ್ನು ಹಿಂಪಡೆಯುವಂತೆ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

‌ಮೋದಿ ಪ್ರಧಾನಿಯಾಗುವ ಖುಷಿಯ ಕ್ಷಣದಂದು ಇಡೀ ದೇಶದಲ್ಲಿ ಕೋಟ್ಯಾಂತರ ಜನತೆ ಜೈ ಹಾಕಿದ್ದಾರೆ. ಹಾಗಾದರೆ ಎಲ್ಲರ ಮೇಲೆ ಇದೇ ಕಾನೂನು ಅನ್ವಯವಾಗುತ್ತಾ? ಅವರ ಮೇಲೆ ಇಂತಹ ಕೃತ್ಯ ನಡೆದಿದಾ? ಕರ್ನಾಟಕ ರಾಜ್ಯದಲ್ಲಿ ಮಾತ್ರ ಇಂತಹ ಕೃತ್ಯಗಳು ಯಾಕೆ ನಡೆಯುತ್ತಿದೆ ಎಂದು ಅವರು ಪ್ರಶ್ನೆ ಮಾಡಿದರು.
ಪಾಕಿಸ್ತಾನಕ್ಕೆ ಜಿಂದಾಬಾದ್ ಘೋಷಣೆ ಕೂಗಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳದ ಪೋಲೀಸ್ ಅಧಿಕಾರಿಗಳು ಭಾರತ್ ಮಾತಕೀ ಜೈ ಹಾಕಿದವರ ಪ್ರಕರಣ ದಾಖಲಿಸುತ್ತಾರೆ ಎಂದಾದರೆ ಪೋಲೀಸರ ಬಗ್ಗೆ ಸಂಶಯಗಳು ವ್ಯಕ್ತವಾಗುತ್ತದೆ.
‌ಕೋಮು ಸೂಕ್ಷ್ಮ ಜಿಲ್ಲೆಯಾಗಿರುವ ದ.ಕ.ಜಿಲ್ಲೆಯಲ್ಲಿ ಪೋಲೀಸರು ನ್ಯಾಯಯುತವಾಗಿ‌ ಕೆಲಸ ಮಾಡುವುದನ್ನು ಬಿಟ್ಟು ರಾಜಕೀಯ ಪಕ್ಷಗಳ ಕೈ ಗೊಂಬೆಯಂತೆ ಕಾರ್ಯನಿರ್ವಹಿಸಿದರೆ ಅಶಾಂತಿ ತಲೆದೋರಬಹುದು ಎಂಬ ಎಚ್ಚರಿಕೆಯನ್ನು ಕೂಡ ನೀಡಿದ್ದಾರೆ.
ಸತ್ಯ,ಧರ್ಮ ಮತ್ತು ನ್ಯಾಯಯುತವಾಗಿ ರಾಜಕೀಯ ರಹಿತವಾಗಿ ಕೆಲಸ ಮಾಡುವುದನ್ನು ಮರೆತು ರಾಜಕೀಯ ಪ್ರೇರಿತರಾಗಿ ಹಿಂದೂವಿರೋಧಿ ನೀತಿ ಅನುಸರಿದರೆ ಜಿಲ್ಲೆಯಲ್ಲಿ ಮುಂದಾಗುವ ಅನಾಹುತಗಳಿಗೆ ಜಿಲ್ಲೆಯ ಪೊಲೀಸರೇ ಹೊಣೆಯಾಗುತ್ತಾರೆ. ಹಾಗಾಗಿ ಯಾವುದೇ ಆಮಿಷಕ್ಕೆ ಬಲಿಯಾಗದೆ ಕಾನೂನಡಿಯಲ್ಲಿ ಪಕ್ಷಪಾತ ಮಾಡದೇ ನ್ಯಾಯಯುತವಾಗಿ ಕೆಲಸ ಮಾಡಿದರೆ ಜಿಲ್ಲೆಯಲ್ಲಿ ಶಾಂತಿ ನೆಲಸಬಹುದು ಎಂಬ ಮಾತನ್ನು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

ಮಾಜಿ ಸಂಸದ ನಳಿನ್ ಕುಮಾರ್ ‌ಕಟೀಲು ಅವರು ಕಾರ್ಯಕರ್ತರನ್ನು ಭೇಟಿಯಾಗಿ ಧೈರ್ಯ ತುಂಬಿ,ದ.ಕ ಜಿಲ್ಲೆಯಲ್ಲಿ ಅರಾಜಕತೆಯನ್ನು ಸೃಷ್ಟಿಸುವ ಹುನ್ನಾರವಾಗಿದ್ದು ಘಟನೆ ಬಳಿಕ ಪರಾರಿಯಾದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ ಹೆಡೆಮುರಿ ಕಟ್ಟುವ ಮೂಲಕ ಕಾನೂನು ಕ್ರಮಗಳನ್ನು ಬಿಗಿಗೊಳಿಸಬೇಕೆಂದು ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ, ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಸಹಿತ ಅನೇಕ ಬಿಜೆಪಿ ಪ್ರಮುಖರು ಹಾಜರಿದ್ದರು.


Share with

Leave a Reply

Your email address will not be published. Required fields are marked *