ಉಡುಪಿ, ಮಂಗಳೂರು ವಾಯುಗುಣಮಟ್ಟ ಮತ್ತಷ್ಟು ಕಳಪೆ ಮಟ್ಟಕ್ಕೆ!

Share with

ಬೆಂಗಳೂರು, ಫೆಬ್ರವರಿ 21: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಮಂಗಳೂರಿನ AQI ಇನ್ನಷ್ಟು ಹದಗೆಟ್ಟಿದೆ.

ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 124ಕ್ಕೆ ತಲುಪಿದೆ. ಅದಕ್ಕಿಂತ ಹೆಚ್ಚಾಗಿ ಮಂಗಳೂರಿನ ಏರ್ ಕ್ವಾಲಿಟಿ 198 ಆಗಿದೆ. ಹಲವು ದಿನಗಳಿಂದ ವಿಪರೀತ ಏರಿಕೆ ಕಾಣುತ್ತಿರುವ ಮಂಗಳೂರಿನ ಏರ್ ಕ್ವಾಲಿಟಿ ಇಂದು 200ರ ಗಡಿ ತಲುಪಿರುವುದು ಆತಂಕಕಾರಿಯಾಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.


Share with

Leave a Reply

Your email address will not be published. Required fields are marked *