ಮಣಿಪಾಲ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Share with

ಉಡುಪಿ: ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ

ಪಂಜಾಬ್‌ ರಾಜ್ಯದ ಫಿರೋಜಿಪುರ ಜಿಲ್ಲೆಯ ತಾರಾಚಂದ್ ಬಂಧಿತ ಆರೋಪಿ. ಮೇಲಾಧಿಕಾರಿಗಳ ಆದೇಶದಂತೆ ಮಣಿಪಾಲ ಪೊಲೀಸ್ ಉಪ ನಿರೀಕ್ಷಕ ರಾಘವೇಂದ್ರ ಹಾಗೂ ಸಿಬ್ಬಂದಿಗಳಾದ ಥಾನ್, ಶರಣಬಸವ ಆರೋಪಿಯನ್ನು ಪಂಜಾಬ್ ರಾಜ್ಯದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.


Share with

Leave a Reply

Your email address will not be published. Required fields are marked *