ಮಂಜೇಶ್ವರ: ರೈಲ್ವೆ ಹಳಿ ಸಮೀಪದ ವಿದ್ಯುತ್ ಕಂಬಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Share with

ಮಂಜೇಶ್ವರ: ಮಂಜೇಶ್ವರ ರೈಲ್ವೆ ನಿಲ್ದಾಣ ಸಮೀಪದ ರೈಲ್ವೆ ಹಳಿಯ ವಿದ್ಯುತ್ ಕಂಬಕ್ಕೆ ವ್ಯಕ್ತಿ ಓರ್ವ ನೇಣು ಬಿಗಿದ ಸ್ಥಿತಿಯಲ್ಲಿ ನಿಗೂಢ ರೀತಿಯಲ್ಲಿ ಮೃತ ದೇಹ ಪತ್ತೆಯಾದ ಘಟನೆ ನಡೆದಿದೆ.

ಮಂಜೇಶ್ವರ ರೈಲ್ವೆ ನಿಲ್ದಾಣ ಸಮೀಪದ ರೈಲ್ವೆ ಹಳಿಯ ವಿದ್ಯುತ್ ಕಂಬಕ್ಕೆ ವ್ಯಕ್ತಿ ಓರ್ವ ನೇಣು ಬಿಗಿದ ಸ್ಥಿತಿಯಲ್ಲಿ ನಿಗೂಢ ರೀತಿಯಲ್ಲಿ ಮೃತ ದೇಹ ಪತ್ತೆ

ಡಿ.6ರಂದು ಬೆಳಿಗ್ಗೆ ನಿಲ್ದಾಣ ಸಮೀಪದ ರೈಲ್ವೆ ಹಳಿ ಪರಿಸರದ ವಿದ್ಯುತ್ ಕಂಬಕ್ಕೆ ಸುಮಾರು 45 ಪ್ರಾಯದ ವ್ಯಕ್ತಿಯ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ದಾರಿಹೋಕರ ಗಮನಕ್ಕೆ ಬಂದಿದೆ. ರೈಲ್ವೆ ನಿಲ್ದಾಣದ ಅಧಿಕಾರಿಗಳು ನೀಡಿದ ಮಾಹಿತಿಯಂತೆ ಮಂಜೇಶ್ವರ ಪೊಲೀಸರು ಸ್ಥಳಕ್ಕೆ ತಲುಪಿ ಮೃತದೇಹದ ಪಂಚನಾಮೆ ನಡೆಸಿ ಮಂಗಲಪಾಡಿ ತಾಲೂಕು ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿ ಮೃತದೇಹದ ಗುರುತು ಪತ್ತೆಗಾಗಿ ಶ್ರಮಿಸುತ್ತಿದ್ದಾರೆ.


Share with

Leave a Reply

Your email address will not be published. Required fields are marked *