Udupi : ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿ ಆತ್ಮಹತ್ಯೆಗೆ ಶರಣು!

Share with

ಉಡುಪಿ : ಉದ್ಯಮಿ ಎನ್ಆರ್ ದಿಲೀಪ್ ಕಾರಿನಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯ ದೂಪದಕಟ್ಟೆ ಬಳಿ ನಡೆದಿದೆ

ಆತ್ಮಹತ್ಯೆಗೆ ಶರಣಾದ ಉದ್ಯಮಿ ಕಾರ್ಕಳ ಪುರಸಭೆಯ ಮಾಜಿ ಅಧ್ಯಕ್ಷ ಸುಭೀತ್ ಸಹೋದರ ಎಂದು ತಿಳಿದುಬಂದಿದೆ. ಕಾರಿನಲ್ಲೇ ಎನ್ ಆರ್ ದಿಲೀಪ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ದಿಲೀಪ್ ಕುಮಾರ್ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ದಿಲೀಪ್ ಎನ್ ಆರ್ ಅವರು ಮಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದು ಮಂಗಳವಾರ ನಸುಕಿನ ಜಾವ ಕಾರ್ಕಳದ ನಿಟ್ಟೆ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿಯ ಎಸ್ಟೇಟ್ ಮುಂಭಾಗ ಕಾರು ನಿಲ್ಲಿಸಿ ಕಾರಿನೊಳಗೆ ಕುಳಿತು ಸ್ವಯಂ ತಾನೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಉದ್ಯಮ ನಷ್ಟ ಹಾಗೂ ವಿಪರೀತ ಸಾಲ ಆತ್ಮಹತ್ಯೆಗೆ ಕಾರಣ ಎಂಬ ಶಂಕೆ ವ್ಯಕ್ತಪಡಿಸಲಾಗಿದೆ. ಕೆಲ ವರ್ಷಗಳಿಂದ ಕುಟುಂಬದ ಜೊತೆ ಮಂಗಳೂರಿನಲ್ಲಿ ವಾಸವಾಗಿದ್ದರು

ಕಾರಿನಲ್ಲಿ ಸ್ವೀಟ್ ಬಾಕ್ಸ್ , ರಿವಾಲ್ವರ್ ಪತ್ತೆಯಾಗಿದ್ದು ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share with

Leave a Reply

Your email address will not be published. Required fields are marked *