ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿಬಿದ್ದ ಘಟನೆ ಕಾಪು ತಾಲೂಕಿನ ಕಟಪಾಡಿಯ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಾ.9ರಂದು ನಡೆದಿದೆ. ಅದೃಷ್ಟವಶಾತ್ ಕಾರು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರು ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದು, ಕಟಪಾಡಿ ಕಲ್ಲಾಪು ಬಳಿ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿಯ ಡಿವೈಡರ್ ಹಾರಿ ಪಕ್ಕದ ಕಂದಕಕ್ಕೆ ಉರುಳಿಬಿದ್ದಿದೆ. ಕಾರಿನಲ್ಲಿ ಚಾಲಕ ಒಬ್ಬನೇ ಇದ್ದ ಪರಿಣಾಮ ಹೆಚ್ಚಿನ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯಲ್ಲಿ ಗಾಯಗೊಂಡ ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾಪು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.