ಪುತ್ತೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧಿತರಾಗಿರುವ ಕೆ ಆರ್ ಪುರಂ ನ ಹಿಂದಿನ ತಹಶೀಲ್ದಾರ್, ಪುತ್ತೂರು ಮೂಲದ ಅಜಿತ್ ಕುಮಾರ್ ರೈ ಅವರನ್ನು ಸರಕಾರಿ ಸೇವೆಯಿಂದ ಅಮಾನತುಗೊಳಿಸಿ ಕಂದಾಯ ಇಲಾಖೆ ಸರಕಾರದ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಆದೇಶ ಪತ್ರದಲ್ಲಿ ಏನಿದೆ?
ಅಜಿತ್ ಕುಮಾರ್ ರೈ ( ಹಿಂದಿನ ತಹಶಿಲ್ದಾರ್ ಗ್ರೇಡ್ 1) ಬೆಂಗಳೂರು ಪೂರ್ವ ತಾಲೂಕು (ಪ್ರಸ್ತುತ ಸ್ಥಳ ನಿರೀಕ್ಷಣೆಯಲ್ಲಿ) ಇವರು ತಮ್ಮ ಬಲ್ಲ ಮೂಲಗಳ ಆದಾಯಕ್ಕಿಂತ 69.80 ಶೇ.ದಷ್ಟು ಹೆಚ್ಚಿನ ಅಕ್ರಮ ಸಂಪತ್ತನ್ನು ಹೊಂದಿರುವುದು ಮಾನ್ಯ ಲೋಕಾಯುಕ್ತ ದಾಳಿಯಲ್ಲಿ ಪ್ರಾಥಮಿಕ ತನಿಖೆಯಿಂದ ದೃಡಪಟ್ಟಿರುವ ಕಾರಣ ಹಾಗೂ ಸದರಿಯವರು ದಿನಾಂಕ 28/06/23 ರಿಂದ ನ್ಯಾಯಾಂಗ ಬಂಧನದಲ್ಲಿರುವುದರಿಂದ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳು, 1957 ರ ನಿಯಮ 10(1)(ಎ)(ಎ) ಮತ್ತು 10(2)(ಎ) ಅನ್ವಯ ದಿನಾಂಕ 28/06/23 ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ವರೆಗೆ ಇಲಾಖಾ ವಿಚಾರಣೆ ಬಾಕಿ ಇರಿಸಿ ಸರಕಾರಿ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದೆ.