ಬಾಸ್ಮತಿ ಅಕ್ಕಿ ರಫ್ತಿಗೆ ದರ ಮಿತಿ ವಿಧಿಸಿದ ಕೇಂದ್ರ ಸರ್ಕಾರ

Share with

ನವದೆಹಲಿ (ಪಿಟಿಐ): ಕೇಂದ್ರ ಸರ್ಕಾರ ಬಾಸ್ಮತಿ ಅಕ್ಕಿಯ ರಫ್ತಿಗೂ ಕೆಲ ನಿರ್ಬಂಧಗಳನ್ನು ವಿಧಿಸಿದೆ.ಕೆಲ ದಿನಗಳ ಹಿಂದೆ, ಬಾಸ್ಮತಿಯೇತರ ವಿಧದ ಅಕ್ಕಿಗಳ ರಫ್ತನ್ನು ಸರ್ಕಾರ ನಿಷೇಧಿಸಿತ್ತು. ಈಗ ನಿರ್ದಿಷ್ಟ ಸ್ತರದ ಬೆಲೆಯ ಬಾಸ್ಮತಿ ಅಕ್ಕಿಯ ರಫ್ತಿಗೆ ನಿರ್ಬಂಧ ಹಾಕಿದೆ.

ಪ್ರತಿ ಟನ್‌ಗೆ 1,200 ಡಾಲರ್‌ಗಿಂತಲೂ (₹99,057) ಕಡಿಮೆ ಬೆಲೆಗೆ ಬಾಸ್ಮತಿ ಅಕ್ಕಿ ರಫ್ತು ಮಾಡಲು ಅವಕಾಶ ನೀಡದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಪ್ರೀಮಿಯಂ ಬಾಸ್ಮತಿ ಅಕ್ಕಿ ಬದಲಾಗಿ ಬಾಸ್ಮತಿ ಅಲ್ಲದ ಅಕ್ಕಿಯನ್ನು ಅಕ್ರಮವಾಗಿ ರಫ್ತು ಮಾಡುವ ಸಾಧ್ಯತೆಯನ್ನು ತಡೆಯಲು ಕೇಂದ್ರ ಈ ನಿರ್ಧಾರಕ್ಕೆ ಬಂದಿದೆ. ಹಣದುಬ್ಬರ ಇನ್ನಷ್ಟು ಏರುವುದನ್ನು ನಿಯಂತ್ರಿಸಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ.


Share with

Leave a Reply

Your email address will not be published. Required fields are marked *