ಉಪ್ಪಳ: ಕೊಳೆತು ಹೋದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ನಡೆದಿದೆ. ಮಂಜೇಶ್ವರದ ಕಣ್ವತೀರ್ಥ ಹೊಳೆಯ ಪರಿಸರದ ಮರಗಳು ತುಂಬಿದ ಖಾಲಿ ಹಿತ್ತಿಲಿನಲ್ಲಿ ಮರಕ್ಕೆ ನೇಣುಬಿಗಿದು ಕೊಳೆತು ದುರ್ವಾಸನೆ ಬೀರುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
ನ.29ರಂದು ಬೆಳಿಗ್ಗೆ ಹಿತ್ತಿಲಿನಲ್ಲಿ ಮೃತದೇಹ ಸ್ಥಳೀಯ ವ್ಯಕ್ತಿಯೋರ್ವರ ಗಮನಕ್ಕೆ ಬಂದಿದೆ. ಈ ಬಗ್ಗೆ ಪೋಲೀಸರಿಗೆ ಮಾಹಿತಿ ನೀಡಿದ್ದು, ಸಿ.ಐ ರಜೀಶ್, ಎಸ್.ಐಗಳಾದ ಪ್ರಶಾಂತ್.ಕೆ, ನಿಖಿಲ್ ನೇತೃತ್ವದಲ್ಲಿ ಸ್ಥಳಕ್ಕೆ ತೆರಳಿ ಮಾಹಿತಿ ಸಂಗ್ರಹಿಸಿದ್ದಾರೆ.
ಸುಮಾರು 50 ವರ್ಷ ಪ್ರಾಯ ಅಂದಾಜಿಸಲಾಗಿದೆ. ಪೋಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.