ಕಾಸರಗೋಡು: ಚಂದ್ರಗಿರಿ ಸೇತುವೆಯಿಂದ ನದಿಗೆ ಹಾರಿದ್ದ ನಗರದ ವ್ಯಾಪಾರಿಯೋರ್ವರ ಮೃತದೇಹ ನ.25ರಂದು ಬೆಳಿಗ್ಗೆ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಉಳಿಯತ್ತಡ್ಕ ಶಿರಿಬಾಗಿಲಿನ ಹಸೈನಾರ್ (46) ಎಂದು ಗುರುತಿಸಲಾಗಿದ್ದು, ತನ್ನ ಜೀವನ ಕೊನೆಗೊಳಿಸುವುದಾಗಿ ಕುಟುಂಬದ ವಾಟ್ಸಪ್ ಗ್ರೂಪ್ ನಲ್ಲಿ ಹಸೈನಾರ್ ನ.24ರಂದು ಮುಂಜಾನೆ ಸಂದೇಶ ಕಳುಹಿಸಿದ್ದರು ಎಂದು ತಿಳಿದು ಬಂದಿದೆ.
ಚಂದ್ರ ಗಿರಿ ಸೇತುವೆಯಲ್ಲಿ ಕಾರು ನಿಲ್ಲಿಸಿ ನದಿಗೆ ಹಾರಿದ್ದನ್ನು ಗಮನಿಸಿದ ಪ್ರತ್ಯಕ್ಷ ದರ್ಶಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ನಾಗರಿಕರು ಶೋಧ ನಡೆಸಿದ್ದು ನ.25ರಂದು ಬೆಳಿಗ್ಗೆ ಮೃತ ದೇಹ ಪತ್ತೆಯಾಗಿದೆ.
ಆರ್ಥಿಕ ಮುಗ್ಗಟ್ಟು ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.