ಚೆನ್ನೈ: ‘ನನ್ನ ಹೃದಯ ಛಿದ್ರವಾಗಿದೆ. ಪದಗಳಲ್ಲಿ ವರ್ಣಿಸಲಸಾಧ್ಯವಾದ ಅಸಹನೀಯ ದುಃಖದಲ್ಲಿ ನರಳುತ್ತಿದ್ದೇನೆ’ ಎಂದು ಕರೂರು ಕಾಲ್ತುಳಿತ ಪ್ರಕರಣದ ಬಗ್ಗೆ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ, ನಟ ವಿಜಯ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ವಿಜಯ್ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.
“ಅತೀವ ನೋವಿನಲ್ಲಿ ನಾನು ನರಳುತ್ತಿದ್ದೇನೆ. ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ ನನ್ನ ಪ್ರೀತಿಯ ಸಹೋದರ, ಸಹೋದರಿಯರ ಕುಟುಂಬಗಳಿಗೆ ನನ್ನ ಸಂತಾಪಗಳು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.
ಏತನ್ಮಧ್ಯೆ, ಕಾಲ್ತುಳಿತ ಘಟನೆ ಕುರಿತು ತನಿಖೆ ನಡೆಸಲು ನಿವೃತ್ತ ನ್ಯಾಯಮೂರ್ತಿ ಅರುಣಾ ಜಗದೀಶನ್ ನೇತೃತ್ವದ ಸಮಿತಿ ರಚನೆ ಮಾಡಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಆದೇಶಿಸಿದ್ದಾರೆ.




