ಚಾಲಕನ ನಿಯಂತ್ರಣ ತಪ್ಪಿ ಮುಗುಚಿ ಬಿದ್ದ ಲಾರಿ

Share with

ರಸ್ತೆ ಬದಿಯ ಚರಂಡಿಗೆ ಬಿದ್ದ ಲಾರಿ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಸೆ.22 ರಂದು ನಡೆದಿದೆ.

ಬೆಂಗಳೂರು ಕಡೆಯಿಂದ ಮಂಗಳೂರಿನ ಕಡೆಗೆ ಹೋಗುತ್ತಿದ್ದ ಲಾರಿಯು ಕಲ್ಲಡ್ಕ ಸಮೀಪದ ದಾಸಕೋಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ. ಚಾಲಕ ಹಾಗೂ ಕ್ಲೀನರ್‌ ಅಲ್ಪ-ಸ್ವಲ್ಪ ಗಾಯಗಳಿಂದ ಪಾರಾಗಿದ್ದು, ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್‌ ಪೊಲೀಸರು ಭೇಟಿ ನೀಡಿದ್ದಾರೆ.


Share with

Leave a Reply

Your email address will not be published. Required fields are marked *