ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ರಾಜ್ಯದ ಜನರು ಬೇಸತ್ತಿರುವ ನಡುವೆಯೇ ರಾಜ್ಯ ಸರ್ಕಾರ ಮತ್ತೊಂದು ಶಾಕ್ ಕೊಟ್ಟಿದೆ. ಇಂಜಿನಿಯರಿಂಗ್ ಪ್ರವೇಶ ಶುಲ್ಕವನ್ನು ಶೇ. 7ರಷ್ಟು ಹೆಚ್ಚಳ ಮಾಡಿದೆ. ಖಾಸಗಿ ಇಂಜಿನಿಯರಿಂಗ್ ಕಾಲೇಜು ಮತ್ತು ಡೀಮ್ಸ್ ವಿವಿ ಗಳಲ್ಲಿರುವ ಸರ್ಕಾರಿ ಕೋಟಾದ ಸೀಟುಗಳಿಗೂ ಈ ನಿಯಮ ಅನ್ವಯವಾಗಲಿದ್ದು, ಸರಾಸರಿ 7 ಸಾವಿರ ರೂ.ಗಳಿಂದ 10 ಸಾವಿರ ರೂ.ವರೆಗೂ ಶುಲ್ಕ ಏರಿಕೆಯಾಗಲಿದೆ. ಇದರಿಂದ ಬಡ ವಿದ್ಯಾರ್ಥಿಗಳಿಗೆ ತೊಂದರೆ ಆಗಲಿದೆ.