CM ಕುರ್ಚಿಗಾಗಿ ನಡೆಯುತ್ತಿರುವ ಕಿತ್ತಾಟದಲ್ಲಿ ಕಾಂಗ್ರೆಸ್ ಸರ್ಕಾರ ರೈತರನ್ನು ಸಂಪೂರ್ಣವಾಗಿ ಮರೆತಿದೆ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ R. ಅಶೋಕ ಹೇಳಿದ್ದಾರೆ.

ಸಿದ್ದರಾಮಯ್ಯ & ಡಿಕೆಶಿ ಸರ್ಕಾರಕ್ಕೆ ಅಧಿಕಾರವೇ ಮುಖ್ಯವಾಗಿದೆ. ರಾಜ್ಯದ ಇತಿಹಾಸದಲ್ಲಿ ರೈತರ ನೋವಿಗೆ ಸ್ಪಂದಿಸದ ಈ ರೀತಿಯ ಸಂವೇದನಾರಹಿತ ಸರ್ಕಾರವನ್ನು ನಾನು ಈವರೆಗೆ ಕಂಡಿರಲಿಲ್ಲ. ರೈತರ ಬದುಕು ನಾಶವಾದರೂ ಪರವಾಗಿಲ್ಲ, ನಮ್ಮ ಕುರ್ಚಿ ಭದ್ರವಾಗಿರಲಿ ಎಂಬಂತೆ CM, DCM ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.




