ಮಲ್ಪೆ: ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಾಲ್ವರನ್ನು ಕೊಲೆ ಮಾಡಿದ ಘಟನೆ ನಡೆದಿದೆ.
ಕೊಲೆಯಾದವರನ್ನು ಹಸೀನಾ (46 ವ), ಅಫ್ನಾನ್ (23 ವ), ಅಯ್ನಾಝ್ (21 ವ), ಆಸಿಂ (12 ವ) ಎಂದು ಗುರುತಿಸಲಾಗಿದೆ. ಚೂರಿಯಿಂದ ಚುಚ್ಚಿ ಕೊಲೆಗೈಯಲಾಗಿದೆ.
ಮನೆಯೊಳಗಿದ್ದ ಮತ್ತೋರ್ವ ವ್ಯಕ್ತಿ ಕೂಡ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿ, ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಸಹಿತ, ಮಾಹಿತಿ ಸಂಗ್ರಹಿಸುತ್ತಿದ್ದಾರೆ.