ಬಂಟ್ವಾಳ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಮಾಣಿಯ ಒಳರಸ್ತೆಯಲ್ಲಿ ನಡೆದಿದೆ.
ಬಿ.ಸಿ ರೋಡು-ಅಡ್ಡಹೊಳೆವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುತ್ತಿಗೆ ವಹಿಸಿಕೊಂಡ ಕೆ.ಎನ್.ಆರ್.ಸಿ ಕಂಪೆನಿಗೆ ಸೇರಿದ ಲಾರಿ ಇದಾಗಿದ್ದು, ಲಾರಿ ಚಾಲಕ ಯಾವುದೇ ಪ್ರಾಣಾಪಾಯ ಇಲ್ಲದೆ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.
ಇತ್ತೀಚಿಗೆ ಸಂಸದರ ಜೊತೆಗೆ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಕಲ್ಲಡ್ಕದ ವರ್ತಕರು ಹಾಗೂ ಸಾರ್ವಜನಿಕರು ನಡೆಸಿದ ಸಭೆಯಲ್ಲಿ ಕೂಡ ಈ ವಿಚಾರ ಪ್ರಸ್ತಾಪವಾಗಿತ್ತು. ಕಂಪೆನಿ ವಾಹನಗಳು ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಾಲನೆ ಮಾಡುವುದರ ಬಗ್ಗೆ ದೂರು ನೀಡಿದ ಅವರು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದರು. ಆದರೆ ಅ ಬಳಿಕವೂ ಮೆಲ್ಕಾರ್ ಸಹಿತ ಅನೇಕ ಕಡೆಗಳಲ್ಲಿ ವಾಹನ ಅಪಘಾತ ಸಂಭವಿಸಿದ್ದು, ಹಾಗಾಗಿ ಕಂಪೆನಿಯ ಪ್ರಮುಖರು ಈ ಬಗ್ಗೆ ಹೆಚ್ಚು ಗಮನಹರಿಸುವಂತಾಗಬೇಕು ಎಂದು ಸಾರ್ವಜನಿಕರು ಆಗ್ರಹ ವ್ಯಕ್ತಪಡಿಸಿದ್ದಾರೆ.