ಭೂಮಿ ವಿಚಾರಕ್ಕಾಗಿ ಕಾರಣಿಕ ದೈವ ಕೊರಗಜ್ಜನ ಗುಡಿಗೇ ಬೆಂಕಿ ಇಟ್ಟ ವ್ಯಕ್ತಿ!

Share with

ಬೆಳ್ತಂಗಡಿ: ಭೂಮಿ ವಿಚಾರಕ್ಕೆ ಗಲಾಟೆ ನಡೆದು ಕಾರ್ಣಿಕ ದೈವ ಕೊರಗಜ್ಜನ ಗುಡಿಗೇ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದ ಬಾಡಾರು ಎಂಬಲ್ಲಿ ನಡೆದಿದೆ.

ಸಾರ್ವಜನಿಕರು ಬಾಡಾರಿನ ಕೊರಗಕಲ್ಲು ಬಳಿ ಇರುವ ಕೊರಗಜ್ಜನ ಕಟ್ಟೆಗೆ ಸಮಿತಿ ರಚಿಸಿ ವರ್ಷಂಪ್ರತಿ ಕೊರಗಜ್ಜನ ಆರಾಧನೆ ಮಾಡುತ್ತಿದ್ದರು. ಆದರೆ ಕೊರಗಜ್ಜನ ಗುಡಿ ಇರುವ ಜಾಗದ ಬಗ್ಗೆ ಸ್ಥಳೀಯ ವ್ಯಕ್ತಿ ಆಕ್ಷೇಪ ವ್ಯಕ್ತಪಡಿಸಿದ್ದರು. ಗುಡಿ ಇರುವ ಜಾಗ ಖಾಸಗಿ ಕುಟುಂಬಸ್ಥರದ್ದು, ಸಾರ್ವಜನಿಕ ಹಸ್ತಕ್ಷೇಪ ಮಾಡಬಾರದೆಂದು ತಗಾದೆ ಎತ್ತಿದ್ದರು. ಈ ತಗಾದೆ ಕೆಲವು ವರ್ಷಗಳಿಂದ ನಡೆಯುತ್ತಿದ್ದು, ಇದೀಗಆ ವ್ಯಕ್ತಿ ಕೊರಗಜ್ಜನ ಗುಡಿಗೇ ಬೆಂಕಿ ಹಚ್ಚಿದ್ದಾರೆ. ಇದನ್ನು ಖಂಡಿಸಿದ ಸ್ವಾಮಿ ಕೊರಗಜ್ಜ ಸಮಿತಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದೆ..


Share with

Leave a Reply

Your email address will not be published. Required fields are marked *