ನಾಪತ್ತೆಯಾಗಿದ್ದ ವ್ಯಕ್ತಿ ಅಸ್ವಸ್ಥರಾಗಿ ಪತ್ತೆ: ಆಸ್ಪತ್ರೆಯಲ್ಲಿ ಮೃತ್ಯು!

Share with

ಹರೀಶ್ ಯಾನೆ ನಾಣ್ಯಪ್ಪ ಪೂಜಾರಿ(65) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕಡಬ: ಅ.3ರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಕಡಬ ತಾಲೂಕಿನ ಹಳೆನೇರೆಂಕಿ ಗ್ರಾಮದ ಆರಾಟಿಗೆ ನಿವಾಸಿ ಹರೀಶ್ ಯಾನೆ ನಾಣ್ಯಪ್ಪ ಪೂಜಾರಿ(65) ಅವರು ಅ.4ರಂದು ಮಧ್ಯಾಹ್ನದ ವೇಳೆಗೆ ಬಿ.ಸಿ ರೋಡ್‌ನ ಬಸ್‌ ನಿಲ್ದಾಣದಲ್ಲಿ ಅಸ್ವಸ್ಥರಾಗಿ ಪತ್ತೆಯಾಗಿದ್ದು, ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಹಳೆನೇರೆಂಕಿಯಲ್ಲಿ ದಿನಸಿ ಅಂಗಡಿ ಹೊಂದಿದ್ದ ಹರೀಶ್ ಯಾನೆ ನಾಣ್ಯಪ್ಪ ಪೂಜಾರಿ ಅವರು ಕಳೆದ ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅ.3ರಂದು ಮಧ್ಯಾಹ್ನ ಮೊಬೈಲ್ ಅಂಗಡಿಯಲ್ಲೇ ಬಿಟ್ಟು ತೆರಳಿದ್ದ ಅವರು ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಅದರಿಂದ ಅ.4ರಂದು ಬೆಳಿಗ್ಗೆ ಮನೆಯವರು ಕಡಬ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ನಂತರ ವ್ಯಕ್ತಿಯೊಬ್ಬರು ಹರೀಶ್ ಅವರು ಅಂಗಡಿಯಲ್ಲಿ ಬಿಟ್ಟು ಹೋಗಿದ್ದ ಮೊಬೈಲ್‌ಗೆ ಕರೆ ಮಾಡಿ ಹರೀಶ್ ಪೂಜಾರಿಯವರು ಬಿ.ಸಿ.ರೋಡ್ ಬಸ್‌ ನಿಲ್ದಾಣದಲ್ಲಿ ಅಸ್ವಸ್ಥರಾಗಿ ಬಿದ್ದಿದ್ದು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿರುವ ಬಗ್ಗೆ ಮಾಹಿತಿಯನ್ನು ನೀಡಿದ್ದರು. ಮನೆಯವರು ಬಂಟ್ವಾಳ ಸರಕಾರಿ ಆಸ್ಪತ್ರೆಯಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ಕರೆದೊಯ್ದಿದ್ದು ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮಧ್ಯಾಹ್ನದ ವೇಳೆಗೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.


Share with

Leave a Reply

Your email address will not be published. Required fields are marked *