ಮಂಗಳೂರಿನಲ್ಲಿ ಎ.14ರಂದು ನಡೆಯಬೇಕಿದ್ದ ಮೋದಿ ಸಮಾವೇಶ ರದ್ದು, ಬದಲಿಗೆ ರೋಡ್ ಶೋ ತಯಾರಿ.!

Share with

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ ಎಂದು ತಿಳಿದು ಬಂದಿದೆ.

ಏಪ್ರಿಲ್ 14ರಂದು ಮಂಗಳೂರಿನಲ್ಲಿ ಕುಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವುದಕ್ಕೆ ಸಿದ್ಧತೆ ನಡೆಸಲಾಗಿತ್ತು. ಇದಕ್ಕಾಗಿ ಇಂದು ಬೆಳಗ್ಗೆ ಮೈದಾನದಲ್ಲಿ ಚಪ್ಪರ ಮುಹೂರ್ತವನ್ನೂ ನಡೆಸಲಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ನಡೆದ ಬದಲಾವಣೆಯಿಂದ ಬೃಹತ್ ಸಮಾವೇಶವನ್ನು ರದ್ದು ಪಡಿಸಲಾಗಿದ್ದು, ಇದರ ಬದಲು ಮಂಗಳೂರು ನಗರದಲ್ಲಿ ಕೇವಲ ರೋಡ್ ಶೋ ನಡೆಸುವುದಕ್ಕೆ ಸಿದ್ಧತೆ ನಡೆಸಲಾಗಿದೆ ಎನ್ನುವ ಮಾಹಿತಿ ಲಭಿಸಿದೆ.

ಪ್ರಧಾನಿ ಮೋದಿ ಅವರು ಏಪ್ರಿಲ್ 14ರಂದು ಸಂಜೆ 4 ಗಂಟೆಗೆ ಮೈಸೂರಿನಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.  ಬಳಿಕ ಮೈಸೂರಿನಿಂದ ಮಂಗಳೂರಿಗೆ ಆಗಮಿಸಲಿದ್ದು, ಸಂಜೆ 6 ಗಂಟೆಗೆ ರೋಡ್ ಶೋ ಆರಂಭಿಸಲಿದ್ದಾರೆ. ಏಪ್ರಿಲ್ 14ರ ಸಂಜೆ 5 ಗಂಟೆಗೆ ಮಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲಿಗೆ ನಾರಾಯಣಗುರು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ರೋಡ್ ಶೋ ನಡೆಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.


Share with

Leave a Reply

Your email address will not be published. Required fields are marked *