ಮಂಗಳೂರು: ಅಕ್ರಮವಾಗಿ ಗೋವು ಮಾಂಸ ಸಾಗಿಸುತ್ತಿದ್ದ ವಾಹನವನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿ ವಾಹನವನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ವಾಹನದಲ್ಲಿ ಮೂವರು ಇದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ವಾಹನದಲ್ಲಿ ಮಂಗಳೂರು ಹೊರ ವಲಯದ ಜೋಕಟ್ಟೆಯಿಂದ ಮಂಗಳೂರು ನಗರದ ಬೀಫ್ ಸ್ಟಾಲ್‌ಗಳಿಗೆ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಉರ್ವಸ್ಟೋರ್ ಬಳಿ ವಾಹನವನ್ನು ತಡೆದು ನಿಲ್ಲಿಸಿ, ವಾಹನದಲ್ಲಿದ್ದ ಮೂವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಗಳ ವಿರುದ್ಧ ಗೋ ಹತ್ಯಾ ನಿಷೇಧ ಕಾಯ್ದೆಯಡಿ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.