ಕೋಳಿ ಮಾಂಸದೊಂದಿಗೆ ಬಸ್ ಹತ್ತಿದ ವ್ಯಕ್ತಿ: ಬಸ್‌ ಸಮೇತ ಪೊಲೀಸ್ ಠಾಣೆಗೊಯ್ದ ಬಸ್ ಚಾಲಕ..!

Share with

ಬಸ್‌ ಸಮೇತ ಪೊಲೀಸ್ ಠಾಣೆಗೊಯ್ದ ಬಸ್ ಚಾಲಕ.

ಬಂಟ್ವಾಳ: ಪ್ರಯಾಣಿಕನೋರ್ವ ಚೀಲದಲ್ಲಿ ಕೋಳಿ ಮಾಂಸ ಹಿಡಿದುಕೊಂಡು ಬಸ್ ಹತ್ತಿದ ಕಾರಣಕ್ಕಾಗಿ ಪ್ರಯಾಣಿಕನೋರ್ವನಿಗೆ ನಿರ್ವಾಹಕ ಅವ್ಯಾಚ್ಯ ಶಬ್ದದಿಂದ ಬೈದು, ಚಾಲಕ ಬಸ್ ಅನ್ನು ಸೀದಾ ಪ್ರಯಾಣಿಕರನ್ನು ಕೂರಿಸಿಕೊಂಡು ಪೋಲಿಸ್ ಠಾಣೆಗೆ ತಂದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಸುರೇಶ್ ಎಂಬುವವರು ತುಂಬೆಯಲ್ಲಿ ಸ್ಟೇಟ್ ಬ್ಯಾಂಕ್ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ಹತ್ತಿದ್ದು, ಈ ವೇಳೆ ಬಸ್ ನಿರ್ವಾಹಕ ಟಿಕೆಟ್ ಪಡೆಯಲು ಬಂದಾಗ ಅವರ ಕೈಯಲ್ಲಿ ಇದ್ದ ಚೀಲದ ಬಗ್ಗೆ ವಿಚಾರಿಸಿದ್ದಾರೆ. ಪ್ರಯಾಣಿಕ ಕೋಳಿ ಮಾಂಸ ಎಂದು ತಿಳಿಸಿದ್ದು, ಪ್ರಯಾಣಿಕನನ್ನು ಬಸ್ ನಿಂದ ಇಳಿಯುವಂತೆ ಒತ್ತಾಯಿಸಿದ್ದಾನೆ. ಕೋಳಿ ಮಾಂಸ ಬಸ್ ನಲ್ಲಿ ತರಲು ಅವಕಾಶವಿಲ್ಲ ಎಂದು ನಿರ್ವಾಹಕ ಹೇಳಿದ್ದು, ಆದರೆ ಪ್ರಯಾಣಿಕನಿಗೆ ಇದರ ಅರಿವಿಲ್ಲದೆ, ಬಸ್ ನಿಂದ ಇಳಿಯಲು ಒಪ್ಪಲಿಲ್ಲ.

ಇವರಿಬ್ಬರ ನಡುವೆ ಕೆಲ ವಾಗ್ವಾದ ನಡೆದಿದ್ದು ಬಳಿಕ ನಿರ್ವಾಹಕ ಪ್ರಯಾಣಿಕನಿಗೆ ಕೆಟ್ಟ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಹೇಳಲಾಗಿದೆ. ಕಡೆಗೂ ಪ್ರಯಾಣಿಕ ಬಸ್ ನಿಂದ ಇಳಿಯದ ಕಾರಣಕ್ಕಾಗಿ ಚಾಲಕನು ಪ್ರಯಾಣಿಕರು ತುಂಬಿದ್ದ ಬಸ್ ಅನ್ನು ಪೋಲೀಸ್ ಠಾಣೆಗೆ ತಂದು ಪ್ರಯಾಣಿಕನನ್ನು ಎಳೆದು ಇಳಿಸಿದ್ದಾನೆ.

ಈ ವೇಳೆ ಠಾಣೆಯಲ್ಲಿದ್ದ ಎಸ್.ಐ.ರಾಮಕೃಷ್ಣ ಅವರು ಕೆ.ಎಸ್. ಆರ್.ಟಿ.ಸಿ.ಬಸ್ ಚಾಲಕ ಮತ್ತು ನಿರ್ವಾಹಕನಿಗೆ ಬುದ್ದಿ ಮಾತು ಹೇಳಿದ್ದಾರೆ ಎಂದು ತಿಳಿದು ಬಂದಿದೆ. ಕೂಲಿ ಕಾರ್ಮಿಕರು ಬಸ್ ನಲ್ಲಿ ಮಾಂಸ ಹಾಗೂ ಮೀನು ಕೊಂಡು ಹೋಗಲು ಅವಕಾಶವಿಲ್ಲ ಎಂದಾದರೆ ಮತ್ತೆ ಹೇಗೆ ಕೊಂಡುಹೋಗುವುದು ಎಂಬ ಪ್ರಶ್ನೆಯನ್ನು ಪ್ರಯಾಣಿಕ ಮಾಡಿದ್ದಾನೆ.

ಕಾರು ಅಥವಾ ರಿಕ್ಷಾ ಬಾಡಿಗೆ ಮಾಡಿಕೊಂಡು ಒಂದು ಕೆ.ಜಿ ಕೋಳಿ ಮಾಂಸ ತೆಗೆದುಕೊಂಡು ಹೋಗಬೇಕಾ ಎಂಬ ಪ್ರಶ್ನೆಯನ್ನು ಕೇಳಿದ್ದಾರೆ. ಬಡವರು ಕೋಳಿ ಮಾಂಸವನ್ನು ಬಸ್ ನಲ್ಲಿ ತೆಗೆದುಕೊಂಡು ಹೋದರೆ ಅವರನ್ನು ಪೋಲೀಸ್ ಠಾಣೆಗೆ ಕರೆದುಕೊಂಡು ಹೋಗುವುದು ಎಷ್ಟು ಸರಿ ಎಂಬ ಪ್ರಶ್ನೆ ಸಾರ್ವಜನಿಕರದ್ದು, ನಿರ್ವಾಹಕ ಚಾಲಕರ ಇಂತಹ ನಡೆಯ ಬಗ್ಗೆ ಅಕ್ರೋಶಗಳು ವ್ಯಕ್ತವಾಗಿದೆ.

ಕೋಳಿ, ಮೀನು ತರುವಂತಿಲ್ಲ- KSRTC ಸ್ಪಷ್ಟನೆ….
ಬಸ್ ನಲ್ಲಿ ಮಾಂಸ ಅಥವಾ ಮೀನು ಬಸ್ ನಲ್ಲಿ ತರುವಂತಿಲ್ಲ, ಜೀವ ಇರುವ ವಸ್ತುವನ್ನು ತರಬಹುದು, ಮಾಂಸ ಇತರರಿಗೆ ವಾಸನೆ ಬರುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತದೆ. ಎಂಬ ನಿಟ್ಟಿನಲ್ಲಿ ನಿಗಮ ಆದೇಶ ಮಾಡಿದೆ ಎಂದು ಕೆ.ಎಸ್.ಆರ್.ಟಿ.ಸಿ ಬಂಟ್ವಾಳ ವಿಭಾಗದ ವಿಭಾಗೀಯ ಅಧಿಕಾರಿ ಶ್ರೀಶ ಭಟ್ ಅವರು ಮಾಹಿತಿಯನ್ನು ನೀಡಿದ್ದಾರೆ.


Share with

Leave a Reply

Your email address will not be published. Required fields are marked *