ಚೆನ್ನೈ: ಭಾರತದ ‘ಹಸಿರು ಕ್ರಾಂತಿ’ಯ ಹರಿಕಾರ ಎಂದು ಖ್ಯಾತರಾಗಿದ್ದ ಎಂ.ಎಸ್ ಸ್ವಾಮಿನಾಥನ್ ಸೆ.28 ರಂದು ಚೆನ್ನೈನಲ್ಲಿ ನಿಧನರಾದರು. ಅವರು ಪತ್ನಿ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಕೃಷಿ ವಿಜ್ಞಾನಿಯಾದ ಇವರು ಭಾರತದಲ್ಲಿ ಹೆಚ್ಚು ಇಳುವರಿ ನೀಡುವ ಗೋಧಿ ಮತ್ತು ಅಕ್ಕಿ ತಳಿಗಳ ಪರಿಚಯವನ್ನು ಅಭಿವೃದ್ಧಿಪಡಿಸಲು ಮತ್ತು ಮುನ್ನಡೆಸಿದ್ದಕ್ಕಾಗಿ, ಅವರಿಗೆ 1987 ರಲ್ಲಿ ಮೊದಲ ವಿಶ್ವ ಆಹಾರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ನಂತರ ಅವರು ಚೆನ್ನೈನಲ್ಲಿ ಎಂ.ಎಸ್ ಸ್ವಾಮಿನಾಥನ್ ಸಂಶೋಧನಾ ಪ್ರತಿಷ್ಠಾನವನ್ನು ಸ್ಥಾಪಿಸಿದರು. ಇವರಿಗೆ ನೀಡಲಾದ ಪುರಸ್ಕಾರಗಳಲ್ಲಿ 1971 ರಲ್ಲಿ ರಾಮನ್ ಮ್ಯಾಗ್ಸೆಸೆ ಪ್ರಶಸ್ತಿ ಮತ್ತು 1986 ರಲ್ಲಿ ಆಲ್ಬರ್ಟ್ ಐನ್‌ಸ್ಟೈನ್ ವರ್ಲ್ಡ್ ಸೈನ್ಸ್ ಪ್ರಶಸ್ತಿ ಸೇರಿವೆ.