ವೀಕ್ಷಕವಾಣಿ: ರಾಜ್ಯದಲ್ಲಿ ದಿನನಿತ್ಯ ಬಳಕೆಯ ಎಲ್ಲಾ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇದರ ಮಧ್ಯೆ ಮೀನು ಮಾರುಕಟ್ಟೆಯಲ್ಲಿ ತಾಜಾ ಮೀನುಗಳ ಬೆಲೆ ಕೂಡ ಏರಿಕೆಯಾಗಿದೆ.
ರಾಜ್ಯದಲ್ಲಿ ದಿನದಿಂದ ದಿನಕ್ಕೆ ದಿನಬಳಕೆ ಸಾಮಾಗ್ರಿಗಳ ಬೆಲೆ ಗಗನಕ್ಕೇರುತ್ತಿದೆ. ಸಾಂಬಾರು ಪದಾರ್ಥಗಳು ಸೇರಿದಂತೆ ಹಣ್ಣು ತರಕಾರಿಗಳ ದುಬಾರಿ ಬೆಲೆಯಿಂದ ಜನರು ಹೈರಾಣಾಗಿದ್ದಾರೆ. ಕೆಲವೆಡೆ ಮಳೆಯ ಅಭಾವದಿಂದ ಇಳುವರಿ ಕಡಿಮೆಯಾದ ಹಿನ್ನೆಲೆ ತರಕಾರಿ, ಹಣ್ಣಿನ ಬೆಲೆ ಹೆಚ್ಚಾಗಿದೆ. ಇದರ ಜೊತೆಗೆ ಮಾರುಕಟ್ಟೆಯಲ್ಲಿ ತಾಜಾ ಮೀನುಗಳಿಗೂ ಕೂಡಾ ಬೆಲೆ ಏರಿಕೆಯಾಗಿದೆ.
ಜೂನ್-ಜುಲೈ ತಿಂಗಳಿನಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿದ್ದು, ಜೂ.1ರಿಂದ ಜು.30 ರವರೆಗೆ ರಾಜ್ಯ ಸರಕಾರ ಯಾಂತ್ರೀಕೃತ ಮೀನುಗಾರಿಕೆಗೆ ತಡೆಯೊಡ್ಡಿದೆ. ಈ ಎರಡು ತಿಂಗಳುಗಳಲ್ಲಿ ಮೀನುಗಳು ಸಂತಾನೋತ್ಪತ್ತಿಯಲ್ಲಿ ತೊಡಗುತ್ತವೆಯಂತೆ. ಈ ಕಾರಣದಿಂದಾಗಿ ಮಾರುಕಟ್ಟೆಯಲ್ಲಿ ತಾಜಾ ಮೀನುಗಳಿಗೆ ಬೆಲೆ ಹೆಚ್ಚಳವಾಗಿದೆ.