ಮಕ್ಕಳು ತರಗತಿಯಲ್ಲಿರುವಾಗಲೇ ಕುಸಿದು ಬಿದ್ದ ಗೋಡೆ.. ಭಯಾನಕ ವಿಡಿಯೋ ವೈರಲ್

Share with

ಗುಜರಾತ್‌: ಖಾಸಗಿ ಶಾಲೆಯೊಂದರ ಗೋಡೆ ಕುಸಿದು ಬಿದ್ದಿರುವ ಘಟನೆ ಗುಜರಾತ್‌ನ ವಡೋದರಾದಲ್ಲಿ ಸಂಭವಿಸಿದೆ. ಘಟನೆಗೆ ಸಂಬಂಧಿಸಿದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿದೆ. ಗೋಡೆ ಕುಸಿದ ಪರಿಣಾಮ ಓರ್ವ ವಿದ್ಯಾರ್ಥಿಗೆ ತೀವ್ರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್​ರೆಯಲ್ಲಿ ದಾಖಲಿಸಲಾಗಿದೆ. ವಡೋದರದ ವಘೋಡಿಯಾ ರಸ್ತೆ ಸಮೀಪದ ಶ್ರೀ ನಾರಾಯಣ ಖಾಸಗಿ ಶಾಲೆಯ ಮೊದಲ ಮಹಡಿಯಲ್ಲಿದ್ದ ತರಗತಿಯ ಗೋಡೆ ಕುಸಿದಿದ್ದು, ಮಧ್ಯಾಹ್ನ 12:30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳವೂ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

“ಮಧ್ಯಾಹ್ನ 12:30 ರ ಸುಮಾರಿಗೆ ಘಟನೆ ಸಂಭವಿಸಿದೆ. ದೊಡ್ಡ ಧ್ವನಿ ಬಂದಿತು, ನಂತರ ನಾವು ಸ್ಥಳಕ್ಕೆ ಧಾವಿಸಿದೆವು. ಒಬ್ಬ ವಿದ್ಯಾರ್ಥಿಗೆ ತಲೆಗೆ ಗಾಯವಾಯಿದೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ” ಎಂದು ಶಾಲಾ ಪ್ರಾಂಶುಪಾಲ ರೂಪಲ್ ಶಾ ಹೇಳಿದ್ದಾರೆ.

ಶಾಲಾ ಆಡಳಿತ ಮಂಡಳಿಯ ಬೇಜಾವಬ್ದಾರಿಯ ಬಗ್ಗೆ ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Share with

Leave a Reply

Your email address will not be published. Required fields are marked *