ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಮ್ಮೆ ಸಂಚಲನ ಸೃಷ್ಟಿಯಾಗಿದೆ. ಶಿವಸೇನೆಯ ಉದ್ಧವ್ ಠಾಕ್ರೆ ಬಣದ 16 ಶಾಸಕರು & 6 ಸಂಸದರು ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎಂಬ ಮಾತು ಕೇಳಿಬರುತ್ತಿವೆ. ಕಳೆದ ಕೆಲವು ದಿನಗಳಿಂದ ಈ ನಾಯಕರು ಉದ್ದವ್ ನಾಯಕತ್ವದ ಬಗ್ಗೆ ಅಸಮಾಧಾನ ಹೊಂದಿದ್ದು, ಬಿಜೆಪಿಯ ಉನ್ನತ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.

ಮುಂಬರುವ ಚುನಾವಣೆಗಳ ದೃಷ್ಟಿಯಿಂದ ಈ ಪಕ್ಷಾಂತರ ಪ್ರಕ್ರಿಯೆ ಮಹಾರಾಷ್ಟ್ರದ ರಾಜಕೀಯ ಸಮೀಕರಣವನ್ನು ಸಂಪೂರ್ಣವಾಗಿ ಬದಲಾಯಿಸುವ ಸಾಧ್ಯತೆಯಿದೆ.




