ಪುತ್ತೂರು : ಪುತ್ತೂರಿನ ಸಂಪ್ಯದಲ್ಲಿ ಕಾರ್ಯಾಚರಿಸುತಿರುವ ಅಕ್ಷಯ ಕಾಲೇಜಿನಲ್ಲಿ ತೃತೀಯ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಸಲಾಯಿತು. ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಶ್ರೀ ಜಯಂತ್ ನಡುಬೈಲು ಇವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಂಡು ಇಂದಿನ ಸ್ಪರ್ಧಾತ್ಮಕ ವೃತ್ತಿ ಬದುಕಿನಲ್ಲಿ ಯಶಸ್ವಿ ಕಾಣಬೇಕು ಎಂದು ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಕೆ ಪಕ್ಕಳ ಮಾತನಾಡಿ ಈ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ಸಾಧನೆ ಅಭೂತಪೂರ್ವ ಇದೆ ಸಾಧನೆ ನಿಮ್ಮ ಭವಿಷ್ಯಧಲ್ಲಿ ,ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದು ಶುಭ ಹಾರೈಸಿಧರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ವ್ಯವಸ್ಥಾಪಕಿ ಶ್ರೀಮತಿ ಕಲಾವತಿ ಜಯಂತ್ , ಆಡಳಿತಾಧಿಕಾರಿ ಅರ್ಪಿತ್ ಟಿ ಎ ಉಪಸ್ಥಿತರಿದ್ಧರು
ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳು ಅನುಭವ ಹಂಚಿಕೊಂಡ ನಂತರ ಅಂತಿಮ ಪದವಿಯ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಲಾಯಿತು.
ವಿದ್ಯಾರ್ಥಿನಿ ಕು ಪ್ರಕೃತಿ ಪ್ರಾರ್ಥಿಸಿ ಕು ದೀಕ್ಷಾ ಎಂ ಆರ್ ಸ್ವಾಗತಿಸಿ ಕು ವಿಶ್ಮಿತಾ ವಂದಿಸಿದರು ಕು ವಿಂದುಶ್ರೀ ಕಾರ್ಯಕ್ರಮ ನಿರೂಪಿಸಿದರು