ಕೆಯ್ಯೂರು ಗ್ರಾ.ಪಂ. ವ್ಯಾಪ್ತಿಯ ಕಟ್ಟತ್ತಾರಿನ ರಸ್ತೆ ಬದಿಯಲ್ಲಿ ಕಸ ಎಸೆದವರನ್ನು ಪತ್ತೆ ಹಚ್ಚಿದ ಪಂಚಾಯತ್ ಅಧಿಕಾರಿಗಳು 5 ಸಾವಿರ ರೂ. ದಂಡ ವಿಧಿಸಿದ್ದಾರೆ.
ಕಸ ಎಸೆದಿರುವ ಬಗ್ಗೆ ಗ್ರಾ. ಪಂ. ಅಧ್ಯಕ್ಷ ಶರತ್ ಕುಮಾರ್ ಮಾಡಾವು ಅವರಿಗೆ ಶನಿವಾರ ಸ್ಥಳೀಯರು ದೂರು ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಪಂಚಾಯತ್ ಅಧಿಕಾರಿಗಳು ತಪ್ಪಿತಸ್ಥರನ್ನು ಪತ್ತೆ ಹಚ್ಚಿ ದಂಡ ವಿಧಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪಿಡಿಒ ನಮಿತಾ ಎ.ಕೆ., ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ, ಅಧ್ಯಕ್ಷ ಶರತ್ ಕುಮಾರ್ ಮಾಡಾವು ಮೊದಲಾದವರಿದ್ದರು.