ಭಜನಾ ಸ್ಪರ್ಧೆಗೆ ತರಬೇತಿ ಪಡೆಯುತ್ತಿದ್ದಾಗ ಬೆದರಿಕೆ: ಪ್ರಕರಣ ದಾಖಲು

Share with

ವೇಣೂರು ಪೊಲೀಸ್‌ ಠಾಣೆಯಲ್ಲಿ ಮುಂಡೂರಿನ ಆನಂದ ಆಚಾರ್ಯ ಎಂಬಾತನ ಮೇಲೆ ಪ್ರಕರಣವು ದಾಖಲಾಗಿದೆ.

ಬೆಳ್ತಂಗಡಿ: ವೇಣೂರು ಶ್ರೀ ಬಾಹುಬಲಿ ಕ್ಷೇತ್ರದ ಪರಿಸರದಲ್ಲಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಜಿನ ಭಜನಾ ಸ್ಪರ್ಧೆಗೆ ತರಬೇತಿ ಪಡೆಯುತ್ತಿದ್ದಾಗ ವ್ಯಕ್ತಿಯೊರ್ವ ಸ್ಥಳಕ್ಕೆ ತೆರಳಿ ಅವಾಚ್ಯ ಶಬ್ದಗಳಿಂದ ಬೈದು, ಮಚ್ಚು ತೋರಿಸಿ ಜೀವ ಬೆದರಿಕೆ ಹಾಕಿರುವುದಾಗಿ ವೇಣೂರು ಪೊಲೀಸ್‌ ಠಾಣೆಯಲ್ಲಿ ಮುಂಡೂರಿನ ಆನಂದ ಆಚಾರ್ಯ ಎಂಬಾತನ ಮೇಲೆ ಪ್ರಕರಣವು ದಾಖಲಾಗಿದೆ ಎಂದು ವರದಿಯಾಗಿದೆ.

ಈತ ವೇಣೂರು ಬಾಹುಬಲಿ ಕ್ಷೇತ್ರದಲ್ಲಿ ವಲಯ ಮಟ್ಟದ ಜಿನ ಭಜನಾ ಸ್ಪರ್ಧೆಗೆ ಮಹಿಳೆಯರು, ಮಕ್ಕಳು ಸೇರಿ ಸುಮಾರು 70 ಮಂದಿ ಅಭ್ಯಾಸ ಮಾಡುತಿದ್ದರು. ಈ ಸಂದರ್ಭ ಅಲ್ಲಿಗೆ ತೆರಳಿದ ಆರೋಪಿ ಮಚ್ಚು ತೋರಿಸಿ, ಬೆದರಿಕೆ ಹಾಕಿದ್ದಾನೆ ಎನ್ನಲಾಗಿದ್ದು, ಕೂಡಲೇ ಸ್ಥಳೀಯರು ವೇಣೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಚ್ಙನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Share with

Leave a Reply

Your email address will not be published. Required fields are marked *