ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವು

Share with

ಆಕಸ್ಮಿಕವಾಗಿ ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವು.

ಮೈಸೂರು: ಆಕಸ್ಮಿಕವಾಗಿ ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಸರಗೂರು ಸಮೀಪದ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸರಗೂರು ತಾಲೂಕಿನ ಚಂಗೌಡನಹಳ್ಳಿಯ ಮಹಮ್ಮದ್ ಕಪಿಲ್, ಶಾವರ ಭಾನು ಹಾಗೂ ಪುತ್ರಿ ಶಾಹೀರಾ ಭಾನು ಮೃತಪಟ್ಟವರು ಎಂದು ಹೇಳಲಾಗಿದ್ದು, ಆಕಸ್ಮಿಕವಾಗಿ ಕಾಲು ಜಾರಿ ನಾಲೆಗೆ ಬಿದ್ದ ಪುತ್ರಿಯನ್ನು ರಕ್ಷಿಸಲು ಹೋದ ತಂದೆ ಮತ್ತು ತಾಯಿ ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದು ತಿಳಿದು ಬಂದಿದೆ.


Share with

Leave a Reply

Your email address will not be published. Required fields are marked *