ಒಂದೇ ಕುಟುಂಬದ ಮೂವರು ಮನೆಯಲ್ಲಿ ಶವವಾಗಿ ಪತ್ತೆ..!

Share with

ಹೈದರಾಬಾದ್‌: ತೆಲಂಗಾಣದ ರಾಜಧಾನಿ ಹೈದರಾಬಾದ್‌ನ ಅಂಬರ್‌ಪೇಟ್ ಪ್ರದೇಶದಲ್ಲಿ ಮಂಗಳವಾರ (ಫೆ.24) ಬೆಚ್ಚಿ ಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದ್ದು ಒಂದೇ ಕುಟುಂಬದ ಮೂವರು ಸದಸ್ಯರು ಮನೆಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ.

ಮೃತರನ್ನು ರಾಮ್ ರಾಜ್ (55), ಅವರ ಪತ್ನಿ ಮಾಧವಿ (50) ಮತ್ತು ಮಗ ಶಶಾಂಕ್ (24) ಎಂದು ಗುರುತಿಸಲಾಗಿದೆ.

ಈ ಕುಟುಂಬದ ಸದಸ್ಯರು ಕಳೆದ ಕೆಲವು ದಿನಗಳಿಂದ ಮನೆಯಿಂದ ಹೊರಗೆ ಬರದೇ ಇರುವುದನ್ನು ಗಮನಿಸಿದ ನೆರೆಹೊರೆಯವರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಬಾಗಿಲು ಮುರಿದು ಒಳಗೆ ಹೋದಾಗ ಮೂವರೂ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಮನೆಯ ಬಾಗಿಲುಗಳು ಒಳಗಿನಿಂದ ಲಾಕ್ ಆಗಿದ್ದು ಪ್ರಾಥಮಿಕ ತನಿಖೆಯ ಪ್ರಕಾರ ಇದು ‘ಆತ್ಮಹತ್ಯೆ’ ಇರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲವಾಗಿದ್ದು, ಆರ್ಥಿಕ ಸಂಕಷ್ಟ ಅಥವಾ ಕೌಟುಂಬಿಕ ಸಮಸ್ಯೆಯಿಂದಲೇ ಈ ನಿರ್ಧಾರಕ್ಕೆ ಬಂದಿರಬಹುದು ಎನ್ನಲಾಗಿದ್ದು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಸಾಗಿಸಲಾಗಿದ್ದು ವರದಿ ಬಂದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.


Share with

Leave a Reply

Your email address will not be published. Required fields are marked *