ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಧಾರಾಕಾರ ಮಳೆ; ಜನರು ಪರದಾಟ

Share with

ಬೆಂಗಳೂರು, ಏಪ್ರಿಲ್ 29: ಸಿಲಿಕಾನ್ ಸಿಟಿಯಲ್ಲಿ (bangaluru) ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಬಿಸಿಲಿನ ಝಳಕ್ಕೆ ಹೈರಾಣಾಗಿದ್ದ ಜನರಿಗೆ ಇದೀಗ ವರುಣ ಶಾಕ್ ನೀಡಿದ್ದಾನೆ. ಸಂಜೆಯಾಗುತ್ತಿದ್ದಂತೆ ನಗರದಾದ್ಯಂತ ಬಿರುಗಾಳಿ, ಗುಡುಗು ಸಮೇತ ಧಾರಾಕಾರವಾಗಿ ಆಲಿಕಲ್ಲು ಮಳೆ (Rain) ಸುರಿದಿದೆ. ದಿಢೀರ್ ಸುರಿದ ಮಳೆರಾಯನ ಆರ್ಭಟಕ್ಕೆ ಸಿಟಿ ಮಂದಿ ಬೆಚ್ಚಿಬಿದ್ದಿದ್ದಾರೆ. ಜನರು ಸೇರಿದಂತೆ ವಾಹನ ಸವಾರರು ಪರದಾಡುವಂತಾಗಿದೆ.

ಏಲ್ಲೆಲ್ಲಿ ಮಳೆ?
ಮೆಜೆಸ್ಟಿಕ್, ಮಾರುಕಟ್ಟೆ (ಮಾರ್ಕೆಟ್), ಶಾಂತಿನಗರ, ರಿಚ್ಮಂಡ್ ಸರ್ಕಲ್, ಕೋರಮಂಗಲ, ಮಲ್ಲೇಶ್ವರಂ, ಶಿವಾನಂದ ಸರ್ಕಲ್, ಗುಟ್ಟಹಳ್ಳಿ, ವಸಂತನಗರ, ಶಾಂತಿನಗರ, ಆರ್.ಟಿ.ನಗರ, ಜಯನಗರ, ಜೆ.ಪಿ‌ ನಗರ, ಹೆಬ್ಬಾಳ, ಶಿವಾಜಿ ನಗರ, ಬನಶಂಕರಿ, ಸದಾಶಿವನಗರ, ವಿಲ್ಸನ್ ಗಾರ್ಡನ್, ಲಾಲ್ ಬಾಗ್, ಡಬಲ್ ರೋಡ್, ರಿಚ್ಮಂಡ್ ಸರ್ಕಲ್ ಮತ್ತು ವಿಧಾನಸೌಧದ ಸುತ್ತಮುತ್ತ ವರುಣ ಆರ್ಭಟಿಸುತ್ತಿದೆ.


Share with

Leave a Reply

Your email address will not be published. Required fields are marked *