ಕುಂಬಳೆ ನಗರದಲ್ಲಿ ಆಗಸ್ಟ್ 11ಕ್ಕೆ ತಿರಂಗಾ ಯಾತ್ರೆ

Share with

ಕಾಸರಗೋಡು: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ‘ರಾಷ್ಟ್ರ ಸ್ವಾಭಿಮಾನ ಸಮಿತಿ’ಯ ನೇತೃತ್ವದಲ್ಲಿ ಆಗಸ್ಟ್ 11ರಂದು ಬೆಳಿಗ್ಗೆ 10 ಗಂಟೆಗೆ ಕುಂಬಳೆ ನಗರದಲ್ಲಿ ಜಿಲ್ಲಾ ಮಟ್ಟದ ತಿರಂಗಾ ಯಾತ್ರೆಯನ್ನು ಆಯೋಜಿಸಲಾಗಿದೆ.

​ಹೋಲಿ ಫ್ಯಾಮಿಲಿ ಶಾಲೆಯ ಆವರಣದಿಂದ ಆರಂಭವಾಗಲಿರುವ ಈ ತಿರಂಗಾ ಯಾತ್ರೆಯಲ್ಲಿ ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಜನರು ಭಾಗವಹಿಸಲಿದ್ದಾರೆ.

​ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಸದಸ್ಯ ಪಿ. ಕೆ. ಕೃಷ್ಣದಾಸ್ ಯಾತ್ರೆಯನ್ನು ಉದ್ಘಾಟಿಸಲಿದ್ದಾರೆ.

​ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ವೇಷಧರಿಸಿ ತಿರಂಗಾ ಯಾತ್ರೆಯಲ್ಲಿ ಪಾಲ್ಗೊಳ್ಳಬಹುದು. ಅತ್ಯುತ್ತಮ ವೇಷಧರಿಸಿದವರಿಗೆ ಬಹುಮಾನ ನೀಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.


Share with

Leave a Reply

Your email address will not be published. Required fields are marked *