ಅಶ್ಲೀಲ ವಿಡಿಯೋ ತೋರಿಸಿ ಕಿರುಕುಳ ನೀಡುತ್ತಿದ್ದ ಗಂಡನ ನಡೆಗೆ ಬೇಸತ್ತು ಮಹಿಳೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹುಳಿಮಾವು ಅಕ್ಷಯನಗರದಲ್ಲಿ ನಡೆದಿದೆ.
ಅನುಷಾ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಪತಿ ಶ್ರೀಹರಿ ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ತೋರಿಸಿ ಹೀಗೆ ಸಹಕರಿಸು ಎಂದು ಟಾರ್ಚರ್ ಕೊಡ್ತಿದ್ದ. ಅಲ್ಲದೇ ಆಕೆಯ ಮುಂದೆಯೇ ಇನ್ನೊಂದು ಹುಡುಗಿ ಜೊತೆ ಇರುತ್ತಿದ್ದು, ಇದನ್ನ ಪ್ರಶ್ನಿಸಿದ್ದಕ್ಕೆ ಹೆಂಡತಿಗೆ ಕಿರುಕುಳ ನೀಡಲು ಆರಂಭಿಸಿದ್ದಾನೆ ಎನ್ನಲಾಗಿದೆ.