ನಾಳೆಯ ಹವಾಮಾನ: ರಾಜ್ಯದ 3 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಬೆಂಗಳೂರಲ್ಲೂ ಮಳೆ

Share with

ಬೆಂಗಳೂರು, ಅಕ್ಟೋಬರ್ 10: ರಾಜ್ಯದಲ್ಲಿ ನಾಳೆಯೂ ವರುಣನ (Rain) ಅಬ್ಬರ ಮುಂದುವರಿಯಲಿದೆ. ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬೆಂಗಳೂರು ಸೇರಿ ರಾಜ್ಯದ 21 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಣ ಹವೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ನಾಳೆ ಎಲ್ಲೆಲ್ಲಿ ಮಳೆ?
ಬಾಗಲಕೋಟೆ, ಗದಗ, ಧಾರವಾಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಹಾವೇರಿ, ದಾವಣಗೆರೆ, ಬಳ್ಳಾರಿ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಾಳಿ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಿಂದ ನಾಳೆ ವರುಣ ದೂರ ಇರಲಿದ್ದು, ಮೋಡ ಕವಿದ ವಾತಾವರಣ ಅಥವಾ ಒಣ ಹವೆ ಇಲ್ಲಿ ಕಂಡುಬರಲಿದೆ.


Share with

Leave a Reply

Your email address will not be published. Required fields are marked *