
ಮಹಾರಾಷ್ಟ್ರದ ಪುಣೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇಂದು ಶಾಲಾ-ಕಾಲೇಜುಗಳಿಗೆ, ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.


ಜನರು ಮನೆಯಿಂದ ಹೊರಗೆ ಬರದಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತವಾಗಿವೆ.

ಮುಂಬೈ, ಥಾಣೆ, ನಾಸಿಕ್, ರತ್ನಗಿರಿ ಮತ್ತು ಪರ್ಭಾನಿ ಪ್ರದೇಶದಲ್ಲೂ ಭಾರೀ ಮಳೆಯಾಗುತ್ತಿದೆ.





