ವೀಕ್ಷಕವಾಣಿ: ಚಾರ್ಮಾಡಿ ಘಾಟ್‌ನಲ್ಲಿ ಪ್ರವಾಸಿಗರು ರಸ್ತೆ ಮಧ್ಯೆ ಬೇಕಾಬಿಟ್ಟಿ ವಾಹನ ನಿಲ್ಲಿಸಿ ಡ್ಯಾನ್ಸ್ ಮಾಡಿ ಹುಚ್ಚಾಟ ಮೆರೆದಿದ್ದಾರೆ. ಇದರಿಂದ ರಸ್ತೆಯುದ್ದಕ್ಕೂ ಟ್ರಾಫಿಕ್ ಜಾಮ್ ಸಂಭವಿಸಿದ್ದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಅಪಾಯದಿಂದ ಕೂಡಿದ ರಸ್ತೆಯಲ್ಲಿ ಪ್ರವಾಸಿಗರು ಮೋಜು ಮಸ್ತಿ ಮಾಡಿದ್ದು, ಇದರಿಂದ ಟ್ರಾಫಿಕ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ದಟ್ಟವಾದ ಮಂಜು ಕೂಡ ಇದ್ದು, ಎದುರಿನಿಂದ ಬರುವ ವಾಹನಗಳು ಸರಿಯಾಗಿ ಕಾಣಿಸೋದಿಲ್ಲ. ಅಲ್ಲದೇ ರಸ್ತೆಗಳು ತಿರುವು ಮುರುವಿನಿಂದ ಕೂಡಿದ್ದು, ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಇದರ ನಡುವೆ ಪ್ರವಾಸಿಗರು ಹುಚ್ಚಾಟ ಮೆರೆದಿದ್ದು, ಸಾರ್ವಜನಿಕರು ಪುಂಡರ ಪುಂಡಾಟಕ್ಕೆ ಬ್ರೇಕ್ ಹಾಕುವಂತೆ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ.