
ಆಲೂರು: ತಾಲೂಕಿನ ಹೊತನಹಳ್ಳಿಪುರ ಗ್ರಾಮದಲ್ಲಿ ಟ್ರ್ಯಾಕ್ಟರ್ ಮಗುಚಿದ ಪರಿಣಾಮ ಲೋಕೇಶ್ (53) ಎಂಬುವವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಸಂಭವಿಸಿದೆ. ಮೃತರು ಹೊತನಹಳ್ಳಿಪುರ ಗ್ರಾಮದ ನಿವಾಸಿಯಾಗಿದ್ದು, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಈ ದುರ್ಘಟನೆಯಿಂದ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದ್ದು, ಮೃತರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಆಲೂರು ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.




