ಹಾಸನ ಗಣಪತಿ ಮೆರವಣಿಗೆಯಲ್ಲಿ ನಡೆದ ದುರಂತ ಪ್ರಕರಣ; ಟ್ರಕ್ ಚಾಲಕನ ವಿರುದ್ಧ ಕೇಸ್

Share with

ಬೆಂಗಳೂರು: ಹಾಸನದ ಶಾಂತಿಗ್ರಾಮ ಬಳಿ ಗಣಪತಿ ಮೆರವಣಿಗೆಯಲ್ಲಿ ಟ್ರಕ್ ಹರಿದು ಸಂಭವಿಸಿದ ದುರಂತದ ಸ್ಥಳಕ್ಕೆ ಹೆಚ್ಚುವರಿ KSRP ತುಕಡಿ ನೇಮಿಸಲಾಗಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಅವರು ತಿಳಿಸಿದ್ದಾರೆ.

ಈ ಕುರಿತು ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಮೃತಪಟ್ಟವರಿಗೆ ತಲಾ 5 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50,000 ಪರಿಹಾರ ಘೋಷಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ದುರಂತಕ್ಕೆ ಕಾರಣನಾದ ಟ್ರಕ್ ಚಾಲಕ ಭುವನ್ ವಿರುದ್ಧ ಗೋರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಸ್ಥಳಕ್ಕೆ ಹೆಚ್ಚುವರಿ KSRP ತುಕಡಿ ನೇಮಿಸಲಾಗಿದೆ ಎಂದು ಹೇಳಿದ್ದಾರೆ.


Share with

Leave a Reply

Your email address will not be published. Required fields are marked *