ಪ್ರತಿಭಟನಾ ಸ್ಥಳಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ: ಬೆಂಗಳೂರು ಖಾಸಗಿ ಸಾರಿಗೆ ಬಂದ್‌ ವಾಪಸ್

Share with

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ 36 ಖಾಸಗಿ ಸಾರಿಗೆ ಸಂಘಟನೆಗಳು ಇಂದು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾ ಸ್ಥಳವಾದ ಫ್ರೀಡಂ ಪಾರ್ಕ್‌ ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಭೇಟಿ ನೀಡಿ ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳು ತಮ್ಮ ಬೇಡಿಕೆಯನ್ನು ಸಾರಿಗೆ ಸಚಿವರ ಮುಂದಿಟ್ಟರು. ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಖಾಸಗಿ ಸಾರಿಗೆ ಸಂಸ್ಥೆಗಳ ಬೇಡಿಕೆಗಳಲ್ಲಿ ಹಲವನ್ನು ಈಡೇರಿಸಲು ಒಪ್ಪಿಗೆ ಸೂಚಿಸಿದ್ದರಿಂದ ಪ್ರತಿಭಟನಾಕಾರರು ಬಂದ್ ಅನ್ನು ವಾಪಸ್‌ ಪಡೆದಿದ್ದಾರೆ. ‌

ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ಸೆ.11ರಂದು ನೀಡಿರುವ ಆಶ್ವಾಸನೆಗಳನ್ನು ಈಡೇರಿಸಲು ಸರ್ಕಾರಕ್ಕೆ 2 ದಿನಗಳ ಗಡುವನ್ನು ಕೊಡಲಾಗಿದೆ ಎಂದು ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರಾದ ನಟರಾಜ್ ಶರ್ಮಾ ಅವರು ತಿಳಿಸಿದ್ದಾರೆ. ಬೇಡಿಕೆ ಈಡೇರಿಸದಿದ್ದರೆ ಸಾರಿಗೆ ಇಲಾಖೆಯ ಕಚೇರಿಯ ಮುಂದೆ ಉಪವಾಸ ಸತ್ಯಾಗ್ರಹ ಕೂರಲಿದ್ದೇವೆ ಎಂದು ಎಚ್ಚರಿಸಿದ್ದಾರೆ.


Share with

Leave a Reply

Your email address will not be published. Required fields are marked *