Coconut Water: ಮುಂಜಾನೆ ಖಾಲಿ ಹೊಟ್ಟೆಯಲ್ಲಿ ‘ಎಳನೀರು’ ಕುಡಿದು ನೋಡಿ!

Share with

ತೆಂಗನ್ನು ಕಲ್ಪವೃಕ್ಷ ಎಂದು ಕರೆದಿರುವುದರಲ್ಲಿ ಯಾವುದೇ ಉತ್ಪ್ರೇಕ್ಷೆಯಿಲ್ಲ. ತೆಂಗಿನ ಪ್ರತಿ ಭಾಗವೂ ಉಪಯುಕ್ತವೇ ಹೌದು. ಆರೋಗ್ಯದ ವಿಷಯಕ್ಕೆ ಬಂದಾಗ ತೆಂಗಿನ ತಿರುಳು, ನೀರು ಮತ್ತು ತೈಲ, ಇವೆಲ್ಲವೂ ಹಲವು ರೀತಿಯಲ್ಲಿ ಪ್ರಯೋಜನ ನೀಡುತ್ತವೆ. ತೆಂಗಿನ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಬೇಸಿಗೆಯಲ್ಲಿ ಇದು ಇನ್ನೂ ಉಪಯುಕ್ತ. ತೆಂಗಿನ ನೀರಿನಲ್ಲಿ ದೇಹಕ್ಕೆ ಬೇಕಾದ ಪೋಷಕಾಂಶಗಳು ಇವೆ. ಇದು ದೇಹವನ್ನು ತಂಪಾಗಿ ಇಡುತ್ತದೆ. ರೋಗ ಎದುರಿಸುವ ಶಕ್ತಿಯನ್ನೂ ಹೆಚ್ಚಿಸುತ್ತದೆ.

ಎಳನೀರು ಆರೋಗ್ಯಕ್ಕೆ ಅತ್ಯಂತ ಪೂರಕವಾಗಿದ್ದು ತೂಕ ಇಳಿಕೆಯ ಪ್ರಯತ್ನಗಳಿಗೆ ಅತಿ ಹೆಚ್ಚಿನ ನೆರವು ನೀಡುತ್ತದೆ. ಅಲ್ಲದೇ ಅಗತ್ಯವಿರುವ ಶಕ್ತಿಯನ್ನು ತಕ್ಷಣವೇ ಒದಗಿಸುವುದು, ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುವುದು, ಸೂಕ್ಷ್ಮಜೀವಿಗಳಿಂದ ರಕ್ಷಣೆ ಒದಗಿಸುವುದು, ಮೂತ್ರದ ಪ್ರಮಾಣ ವರ್ಧಿಸಿ ದೇಹದಿಂದ ಕಲ್ಮಶಗಳನ್ನು ನಿವಾರಿಸಲು ನೆರವಾಗುತ್ತದೆ.

ನಿತ್ಯವೂ ಬೆಳಗ್ಗಿನ ಪ್ರಥಮ ಆಹಾರವಾಗಿ ಒಂದು ಭರ್ತಿ ಎಳನೀರನ್ನು ಕುಡಿದರೆ ದಿನದ ಅಗತ್ಯದ ಎಲೆಕ್ಟ್ರೋಲೈಟುಗಳು ಲಭಿಸುತ್ತವೆ ಹಾಗೂ ಇವು ಅಧಿಕ ರಕ್ತದೊತ್ತಡ ಎದುರಾಗದಂತೆ ತಡೆಯುತ್ತವೆ.ಎಳನೀರು ಥೈರಾಯ್ಡ್ ಗ್ರಂಥಿಯ ಸ್ರವಿಕೆಗೆ ಪ್ರಚೋದನೆ ಒದಗಿಸುತ್ತದೆ.

ತ್ವಚೆಯ ಆರೋಗ್ಯ ಉತ್ತಮವಾಗಿರಲು ದೇಹದಲ್ಲಿ ಸಾಕಷ್ಟು ಪ್ರಮಾಣದ ಆರ್ದ್ರತೆ ಇರಬೇಕು. ಎಳನೀರನ್ನು ಕುಡಿಯುವ ಹೊರತಾಗಿ ಎಳನೀರನ್ನು ತ್ಬೆಚೆಗೆ ಹಚ್ಚಿಕೊಳ್ಳುವ ಮೂಲಕವೂ ಅಗತ್ಯವಿರುವ ಪೋಷಣೆಯನ್ನು ಒದಗಿಸಬಹುದು. ಪರಿಣಾಮವಾಗಿ ಕ್ಷಿಪ್ರ ಸಮಯದಲ್ಲಿಯೇ ತ್ವಚೆ ಹೊಳೆಯಲಾರಂಭಿಸುತ್ತದೆ. ಎಳನೀರು ನೈಸರ್ಗಿಕ ಹಾಗೂ ಅತ್ಯುತ್ತಮವಾದ ತೇವಕಾರಕವಾಗಿದೆ ಹಾಗೂ ಈ ಗುಣ ಮೊಡವೆಗಳನ್ನು ದೂರವಿಡುತ್ತದೆ.


Share with

Leave a Reply

Your email address will not be published. Required fields are marked *