ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬಂಟ್ವಾಳ ತಾಲೂಕಿನ ಬಂಟ್ವಾಳ ವಲಯದ ನಾವೂರು ಸರಕಾರಿ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಟ್ಯೂಷನ್ ತರಗತಿ ಹಮ್ಮಿಕೊಂಡಿದ್ದು, ಸಭೆಯ ಅಧ್ಯಕ್ಷ ಸ್ಥಾನವನ್ನು ಒಕ್ಕೂಟದ ಅಧ್ಯಕ್ಷರಾದ ಸಂತೋಷರವರು ವಹಿಸಿದ್ದರು.


ತಾಲೂಕಿನ ಯೋಜನಾಧಿಕಾರಿಯವರಾದ ಮಾಧವ್ ಗೌಡ ಸರ್ ರವರು ಉದ್ಘಾಟನೆ ಮಾಡಿ, ಯೋಜನೆಯಿಂದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗಳಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು ಹಾಗೂ SSLC ಮಕ್ಕಳು ಅತಿ ಹೆಚ್ಚಿನ ಅಂಕದೊಂದಿಗೆ ತೇರ್ಗಡೆಯಾಗಬೇಕು ಎಂದು ಮಾಹಿತಿ ಮಾರ್ಗದರ್ಶನ ನೀಡಿದರು.
ಶಾಲಾ ಮುಖ್ಯ ಶಿಕ್ಷಕರಾದ ಅರ್ಚನಾ ಮೇಡಂ ಎಲ್ಲಾ ವಿದ್ಯಾರ್ಥಿಗಳು 90%ಕಿಂತ ಹೆಚ್ಚು ಅಂಕ ಪಡೆಯುವಂತೆ ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಶಿಕ್ಷಕಿಯಾದ ವಿದ್ಯಾ ಮೇಡಂ ಸ್ವಾಗತಿಸಿ, ವೆಲೇರಿಯನ್ ಸರ್ ಧನ್ಯವಾದ ನೀಡಿ ದರು. ಮೇಲ್ವಿಚಾರಕಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು, ಸೇವಾ ಪ್ರತಿನಿಧಿ ಉಪಸ್ಥಿತರಿದ್ದರು.




