ಬಂಟ್ವಾಳ: ಬಂಟ್ವಾಳ ತಾಲೂಕಿನ ಮೈರ ಮೂಲದ ಕುದ್ದುಪದವು ನಿವಾಸಿಗಳಾದ ಪವನ್ ಮತ್ತು ಪೃಥ್ವಿರಾಜ್ ಎಂಬ ಸಹೋದರರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷ ಸೇವನೆಯಿಂದ ತೀವ್ರ ಅಸ್ವಸ್ಥಗೊಂಡ ಇಬ್ಬರನ್ನು ವಿಟ್ಲ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಎರಡು ಪ್ರತ್ಯೇಕ ವಾಹನಗಳಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಇವರ ತಂದೆ ಮೃತಪಟ್ಟಿದ್ದು, ತಾಯಿ ಮೈರದಲ್ಲಿ ವಾಸವಾಗಿದ್ದು, ಸಹೋದರರು ಅಜ್ಜಿ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.