ಎರಡು ದಿನ ಮದ್ಯ ನಿಷೇಧ

Share with

ಮಂಗಳೂರು, ಅ.16: ದಕ್ಷಿಣ ಕನ್ನಡ ಸ್ಥಳೀಯ ಪ್ರಾ ಧಿಕಾರದ ಉಪಚುನಾವಣೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ನಿಷ್ಪಕ್ಷಪಾತ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲು ಮತದಾನ ಮುಕ್ತಾಯವಾಗುವ 48 ಗಂಟೆಗಳ ಅವಧಿಯೊಳಗಿನ ದಿನಗಳು ಮತ್ತು ಮತ ಎಣಿಕೆ ದಿನದಂದು ಹಾಗೂ ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಅ.19ರಂದು ಸಂಜೆ 4ರಿಂದ ಅ.21ರ ಸಂಜೆ 4 ಗಂಟೆಯವರೆಗೆ ಹಾಗೂ ಮತ ಎಣಿಕೆ ದಿನವಾದ ಅ.24ರಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆಯವರೆಗೆ ಮದ್ಯ ಮುಕ್ತ ದಿನಗಳು ಎಂದು ಘೋಷಿಸಲಾಗಿದೆ. ಎಲ್ಲ ವಿದಧ ಮದ್ಯದಂಗಡಿಗಳನ್ನು ಮಚ್ಚುವಂತೆ ಹಾಗೂ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾ ಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲೈಮುಗಿಲನ್ ಎಂ.ಪಿ. ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.


Share with

Leave a Reply

Your email address will not be published. Required fields are marked *