ಹೆತ್ತ ತಂದೆಯೇ ಮದ್ಯದ ಅಮಲಿನಲ್ಲಿ ತನ್ನ ಇಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ಅತ್ಯಾಚಾರ ಮಾಡಿರುವ ಆಘಾತಕಾರಿ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸುದ್ದಿ ಕೇಳಿ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.

ಮಂಜುನಾಥ್ ಎಂಬ ವ್ಯಕ್ತಿಯೇ ತನ್ನ 13 & 10 ವರ್ಷದ ಅಪ್ರಾಪ್ತ ಪುತ್ರಿಯರ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಕಾನೂನು ಕ್ರಮಕ್ಕೆ ಆಗ್ರಹಿಸಿ ಸ್ಥಳೀಯ ಗ್ರಾಮಸ್ಥರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಮನವಿ ಸಲ್ಲಿಕೆ ಮಾಡಿದ್ದಾರೆ.




